ಮತದಾರರನ್ನು ಬೆದರಿಸಿದ ಆರೋಪ; ಡಿಕೆಶಿ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ಸಹೋದರನ ಪರವಾಗಿ ಮತಯಾಚನೆ ಮಾಡುವ ವೇಳೆಯಲ್ಲಿ ಅಪಾರ್ಟ್ಮೆಂಟ್‌ ಒಂದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಆರ್​ಆರ್​ ನಗರ ಅಪಾರ್ಟ್ಮೆಂಟ್ ಘಟನೆ ನಡೆದಿದೆ ಎನ್ನಲಾಗಿದ್ದು, ಬಿಜೆಪಿ ನೀಡಿದ ಮಾಹಿತಿಯ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.

ಈ ಮೊದಲು ಕೂಡ ಡಿಕೆಶಿ ಮತದಾರರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ‘ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ?, ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2 ರಿಂದ 3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ’ ಎಂದು ಡಿಕೆಶಿ ಕೇಳುತ್ತಿರುವುದು ಬಿಜೆಪಿ ಟ್ವೀಟ್ ಮಾಡಿದ ವಿಡಿಯೋದಲ್ಲಿದ್ದು, ದೂರು ನೀಡಲಾಗಿತ್ತು.

Maithri S

Recent Posts

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

3 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

34 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

42 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

44 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago