Bengaluru 22°C
Ad

ಕೋಟ್ಯಾಂತರ ರೂ. ಸುಲಿಗೆ ಆರೋಪ : ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌

ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.

Ad
Ad
Nk Channel Final 21 09 2023