ಬೆಂಗಳೂರು : ಸೂರ್ಯನ ಪ್ರಖರ ಶಾಖ ಮಿತಿಮೀರುತ್ತಿದ್ದು, ಈ ನಡುವೆ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ನಂದಿಗಿರಿಧಾಮದ ತಪ್ಪಲಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಣಿವೆ ಬಸವಣ್ಣ ದೇಗುಲದ ಸಮೀಪ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿ ವ್ಯಾಪಿಸಿದೆ. ಧಿಡೀರ್ ಬೆಂಕಿ ಹೆಚ್ಚಾಗಿರೋದು ಆತಂಕಕ್ಕೆ ಕಾರಣವಾಗಿದೆ. ಬೇಸಿಗೆಯ ಬಿಸಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಗೊತ್ತಾಗಿದೆ.

ಬೆಂಕಿ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಬೆಂಕಿ ನಂದಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಾರೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ನೀಡುತ್ತಾರೆ. ಎಲ್ಲರ ಹಿತದೃಷ್ಟಿಯಿಂದ ಕಟ್ಟೆಚ್ಚರ ವಹಿಸಲಾಗಿದೆ.