ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಸ್ಕ್ರಾಪ್ ಗೋದಾಮಿಗೆ ಬೆಂಕಿ ಬಿದ್ದ ಘಟನೆ ಚಿಕ್ಕಪೇಟೆಯಲ್ಲಿ ನಡೆದಿದ್ದು, ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಇಡೀ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.

ಚಿಕ್ಕಪೇಟೆಯ ಸ್ಕ್ರ್ರಾಪ್ ಗೋಡೌನ್ ನಲ್ಲಿ ಬೆಂಕಿಯ ಜ್ವಾಲೆ ಹೆಚ್ಚಾಗಿರೋದ್ರಿಂದ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಬಿಲ್ಡಿಂಗ್ ಗೂ ವ್ಯಾಪಿಸೋ ಆತಂಕ ನಿರ್ಮಾಣವಾಗಿದೆ.

ಪ್ಲಾಸ್ಟಿಕ್ ಸೇರಿದಂತೆ ಕೆಲ ಸ್ಕ್ರಾಪ್ ವಸ್ತುಗಳನ್ನ ಇಟ್ಟಿದ್ದ ಮಳಿಗೆಗೆ ಏಕಾಏಕಿ ಬೆಂಕಿ ಆವರಿಸಿದ್ದು, ಅಗ್ನಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು,ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.