ಪಟಾಕಿ ಗೋದಾಮು ಅಗ್ನಿದುರಂತ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು: ಕುಮಾರಸ್ವಾಮಿ

ಬೆಂಗಳೂರು: ಸಂಜೆ ನಡೆದ ಪಟಾಕಿ ಗೋದಾಮು ಅಗ್ನಿದುರಂತ ಅತ್ಯಂತ ದುರದೃಷ್ಟಕರ ಘಟನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾಧಿಸಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಗ್ಧ ಕಾರ್ಮಿಕರು ಸಾವನ್ನಪ್ಪಿದ ಘಟನೆ ನನಗೆ ಬಹಳ ದುಃಖವನ್ನುಂಟು ಮಾಡಿದೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೀಪಾವಳಿ ಹಬ್ಬ ಬರುತ್ತಿರುವ ಸನಿಹದಲ್ಲಿ ಮುಗ್ದ ಕಾರ್ಮಿಕರ ಮನೆಗಳಲ್ಲಿ ಈಗ ಕತ್ತಲು ತುಂಬಿದೆ. ಅವರೆಲ್ಲರೂ ಬದುಕು ಕಟ್ಟಿಕೊಳ್ಳುವ ಕನಸು ಕಾಣುತ್ತಿದ್ದ ಹುಡುಗರು ಎಲ್ಲರ ನಿರ್ಲಕ್ಷದಿಂದ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸಂಗ್ರಹ, ಮಾರಾಟದ ಬಗ್ಗೆ ಸರಕಾರ ಅತ್ಯಂತ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮೃತ ಕಾರ್ಮಿಕ ಕುಟುಂಬಗಳಿಗೆ ಸರಕಾರ ನೆರವು ನೀಡುವುದು ಮುಖ್ಯವಲ್ಲ. ಇಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಹದ್ದಿನ ಕಣ್ಣಿಡಬೇಕು. ಘಟನೆಯ ಬಗ್ಗೆ ಆಮೂಲಾಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಮಾಯಕರ ಸಾವಿಗೆ ನ್ಯಾಯ ಕೊಡಿಸಬೇಕು. ಪಟಾಕಿಗಳ ದಾಸ್ತಾನು, ತಯಾರು ಮಾಡುವ ಪ್ರದೇಶ ಜನನಿಬಿಡ ಪ್ರದೇಶದಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.

Ashika S

Recent Posts

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

1 min ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

13 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

33 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

57 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 hours ago