ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು(ಡಿಸೆಂಬರ್ 27) ಮೊದಲ ರಾಜ್ಯ ಪದಾಧಿಕಾರಿಗಳ ತಂಡದ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ ಚರ್ಚೆಯಾಗಲಿದೆ.
ಮೊದಲ ಹಂತವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ನಡೆದರೆ, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವ ಸಭೆ ನಡೆಯಲಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ.