Bengaluru 22°C
Ad

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜಭವನ್ ಚಲೋ

ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ₹187 ಕೋಟಿ ವಂಚನೆಯನ್ನು ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ.

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ₹187 ಕೋಟಿ ವಂಚನೆಯನ್ನು ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ನೇತೃತ್ವದ ನಿಯೋಗ ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಮನವಿಯನ್ನು ಸಲ್ಲಿಸಿತು.

ಆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, ‘ಹೈದರಾಬಾದ್ ನಲ್ಲಿ 18 ಕ್ಕೂ ಹೆಚ್ಚು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದರು.

Ad
Ad
Nk Channel Final 21 09 2023
Ad