ಸೆ.12 ರಿಂದ ಕೆಂಪೇಗೌಡ ಟರ್ಮಿನಲ್​ 2ರಿಂದ ವಿದೇಶಿ ವಿಮಾನಗಳ ಹಾರಾಟ ಆರಂಭ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ಟರ್ಮಿನಲ್2 ರಲ್ಲಿ ಅಂತರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಮೊದಲ ವಿಮಾನ ಸಿಂಗಾಪುರದಿಂದ ಬರಲಿತ್ತು. ಆದ್ರೆ ವಿಮಾನ ಹಾರಾಟ ಮುಂದೂಡಲಾಗಿದೆ.

‘ತಾಂತ್ರಿಕ ದೋಷ ಹಾಗೂ ಕೆಲ ಸಮಸ್ಯೆಗಳಿಂದ ಇಂದಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋಟ್​ನ ಗಾರ್ಡನ್ ಟರ್ಮಿನಲ್​ ಎರಡರಿಂದ ಹಾರಾಟ ಮಾಡಬೇಕಿದ್ದ ವಿದೇಶಿ ವಿಮಾನಗಳ ಹಾರಾಟವನ್ನು ಸೆ.12, ಬೆಳಿಗ್ಗೆ 10.45 ನಂತರ ಪ್ರಾರಂಭಿಸಲಾಗುವುದು’ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಯಂತ್ರಕರ ಅಂಗೀಕಾರ, ಕಾರ್ಯಾಚರಣೆಯ ದಕ್ಷತೆ ಹಾಗೂ ಪ್ರಯಾಣಿಕರ ಅನುಕೂಲತೆ ಸೇರಿದಂತೆ ವಿವಿಧ ಅಂಶಗಳನ್ನು ಎಚ್ಚರಿಕೆಯಿಂದ ಪರೀಕ್ಷಿಸಿ ಮತ್ತು ಪರಿಗಣಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ವಿಮಾನ ಯಾನ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನಮ್ಮ ಪ್ರಯಾಣಿಕರಿಗೆ ಈ ಬದಲಾವಣೆಯನ್ನು ಸುಗಮವಾಗಿಸಲು ನಾವು ಬದ್ಧರಾಗಿದ್ದೇವೆ. ಹೊಸ ಸೌಲಭ್ಯಕ್ಕೆ ಅಂತಾರಾಷ್ಟ್ರೀಯ ಕಾರ್ಯಾಚರಣೆಯ ಅಡಚಣೆರಹಿತ ಸ್ಥಳಾಂತರಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ನಿಮ್ಮ ತಾಳ್ಮೆ ಮತ್ತು ಅಚಲ ಬೆಂಬಲ ಪ್ರಶಂಸನೀಯ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ ವಕ್ತಾರರು ಹೇಳಿದ್ದಾರೆ.

Ashitha S

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

6 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

17 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

27 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

33 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

38 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

40 mins ago