ಸೆಲೆಬ್ರಿಟಿಗಳಿಗೆ ʼಹುಲಿʼ ಸಂಕಷ್ಟ: ದರ್ಶನ್‌, ಜಗ್ಗೇಶ್‌, ರಾಕ್‌ ಲೈನ್‌ ಮನೆಯಲ್ಲಿ ಅಧಿಕಾರಿಗಳ ಶೋಧ

ಬೆಂಗಳೂರು: ಹುಲಿ ಉಗುರು ಹೊಂದಿದ ಆರೋಪದಲ್ಲಿ ಬಿಗ್‌ ಬಾಸ್‌ ಮನೆಯಿಂದ ವರ್ತೂರು ಸಂತೋಷ್‌ ಅವರ ಬಂಧನವಾದ ಬೆನ್ನಲ್ಲೆ ಹಲವು ಚಿತ್ರತಾರೆಯರಿಗೆ ಹುಲಿ ಸಂಕಷ್ಟ ಎದುರಾಗಿದೆ.

ಇದೀಗ ನಟ ದರ್ಶನ್​ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದರ ಬೆನ್ನಲ್ಲೇ ದೂರು ಕೂಡ ದಾಖಲಾಗಿತ್ತು. ಇಂದು (ಅಕ್ಟೋಬರ್​ 25) ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಬಂದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಸೋಶಿಯಲ್​ ಮೀಡಿಯಾದಲ್ಲಿ ದರ್ಶನ್​, ರಾಕ್​ಲೈನ್​ ವೆಂಕಟೇಶ್​, ಜಗ್ಗೇಶ್​, ನಿಖಿಲ್​ ಕುಮಾರಸ್ವಾಮಿ ಅವರ ಫೋಟೋಗಳು ವೈರಲ್​ ಆಗಿವೆ. ಈ ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ವೈರಲ್​ ಆಗಿರುವ ಫೋಟೋದ ಆಧಾರದ ಮೇಲೆ ದೂರು ನೀಡಲಾಗಿತ್ತು. ಅದರ ಅನ್ವಯ ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪ ಎದುರಿಸುತ್ತಿರುವ ಎಲ್ಲರಿಗೂ ನೋಟೀಸ್​ ನೀಡಲಾಗುತ್ತಿದೆ. ಅಲ್ಲದೇ ತಪಾಸಣೆ ಕೂಡ ಮಾಡಲಾಗುತ್ತಿದೆ.

Ashitha S

Recent Posts

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

2 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

15 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

33 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

44 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

58 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago