ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ.
ಗುತ್ತಿಗೆದಾರ ಚೆಲುವರಾಜು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಆಡಿಯೋ ಬಹಿರಂಗವಾದ ಬಳಿಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದರು. ಇದರ ಬೆನ್ನಲ್ಲೇ ಮಹಿಳೆಯೊಬ್ಬರು ಅತ್ಯಾಚಾರ ಆರೋಪದ ಅಡಿ ಮುನಿರತ್ನ ವಿರುದ್ಧ ದೂರು ದಾಖಲಿಸಿದ್ದಾರೆ.
ಹೀಗಾಗಿ ಮುನಿರತ್ನ ಅವರಿಗೆ ಜಾಮೀನು ದೊರೆತರೂ ಬಂಧನದಿಂದ ಮುಕ್ತಿ ಸಿಗಲಿಲ್ಲ. ಇದೀಗ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಗಂಭೀರತೆಯನ್ನು ಅರಿತು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಯನ್ನು ರಚಿಸಿದೆ.
Ad