ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಪೆಂಡೆಂಟ್ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂಬ ಕಾರಣಕ್ಕೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನದ ಬೆನ್ನಲ್ಲೇ ರಾಜ್ಯಾದ್ಯಂತ ಅನೇಕ ಕಡೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.
ಆರ್ಯವರ್ಧನ್ ಕೂಡ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು. ಆ ಸಮಯದಲ್ಲೇ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಈಗ ಅದನ್ನು ಪತ್ತೆ ಹಚ್ಚಲಾಗಿದೆ. ಆರ್ಯವರ್ಧನ್ ಕಚೇರಿಗೆ ಆಗಮಿಸಿದ ಅರಣ್ಯಾಧಿಕಾರಿಗಳು, ನೋಟಿಸ್ ನೀಡಿ ಪರಿಶೀಲನೆ ನಡೆಸಿದ್ದಾರೆ.