News Karnataka Kannada
Saturday, May 11 2024
ಬೆಂಗಳೂರು

ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ ಭಟ್ಟಾಚಾರ್ಯ ನಿಧನ

Battacharya
Photo Credit : Twitter

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ ಭಟ್ಟಾಚಾರ್ಯ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಶನಿವಾರ(ನ.18) ತಿಳಿಸಿವೆ. 83 ವರ್ಷದ ನಿವೃತ್ತ ಐಎಎಸ್ ಅಧಿಕಾರಿ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಶುಕ್ರವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

ಅದೇ ದಿನ ಸಂಜೆ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಭಟ್ಟಾಚಾರ್ಯ ಅವರು ಪತ್ನಿ ತೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರು ಡಿಸೆಂಬರ್ 5, 1940 ರಂದು ಜನಿಸಿದರು ಮತ್ತು ಡಿಸೆಂಬರ್ 30, 2000 ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ಭಟ್ಟಾಚಾರ್ಯ ಅವರ ನಿಧನಕ್ಕೆ ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಟ್ಟಾಚಾರ್ಯ ಅವರ ನಿಧನಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಕಳೆದ ದಿನ ರಾತ್ರಿ ಅತ್ಯಂತ ಹಿರಿಯ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಶ್ರೀ ಬಿ ಕೆ ಭಟ್ಟಾಚಾರ್ಯ ಅವರು ನಿಧನರಾಗಿದ್ದಾರೆ ಎಂದು ತಿಳಿದು ನನಗೆ ದುಃಖವಾಗಿದೆ. ನಾನು 1994-1999 ರ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದಾಗ ಅವರು ನನ್ನೊಂದಿಗೆ ಕಾರ್ಯದರ್ಶಿಯಾಗಿ ಹಣಕಾಸು ಸೇವೆ ಸಲ್ಲಿಸಿದರು. ಅವರು ಪ್ರಾಮಾಣಿಕ ಅಧಿಕಾರಿಯಾಗಿದ್ದರು ಮತ್ತು ನಾನು ಅವರೊಂದಿಗೆ ಕೆಲಸ ಮಾಡುವುದನ್ನು ಬಹಲ ಇಷ್ಟಪಟ್ಟಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು