ಬೆಂಗಳೂರು : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಎಂಬುವವರ ಮಗ ಹೇಮಂತ್ ಆರ್ ಎಂವಿ ಎರಡನೇ ಹಂತದ ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ವರದಿ ಆಗಿದೆ. ಸಂಜಯನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿಯೇ ಹೇಮಂತ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

