ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಭಾನುವಾರವೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯ ಸಂಘಟನಾ ಕಾರ್ಯದರ್ಶಿ ಜೆ.ವಿ ರಾಜೇಶ್ , ಮೊದಲಾದವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಮಂಗಳವಾರ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಂಸದ ಶಿವಕುಮಾರ್ ಉದಾಸಿ, ಸೇರಿದಂತೆ ಪಕ್ಷದ ಮುಖಂಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೊಮ್ಮಾಯಿ ಅವರಿಗೆ ಕನಿಷ್ಠ ಒಂದು ತಿಂಗಳ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅಧಿವೇಶನದವರೆಗೆ ವಿಶ್ರಾಂತಿಯಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.