News Karnataka Kannada
Friday, May 03 2024
ಬೆಂಗಳೂರು

ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್

ಮೈಸೂರಲ್ಲಿ ಸಂಸದ ಪ್ರತಾಪ ಸಿಂಹ ಅವರ ಬಳಿಕ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗೋದು ಪಕ್ಕಾ ಆಗಿದೆ. 2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ.
Photo Credit : News Kannada

ಬೆಂಗಳೂರು: ಮೈಸೂರಲ್ಲಿ ಸಂಸದ ಪ್ರತಾಪ ಸಿಂಹ ಅವರ ಬಳಿಕ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗೋದು ಪಕ್ಕಾ ಆಗಿದೆ. 2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಕರೆ ಮಾಡಿ ಡಿವಿಎಸ್‌ ಜೊತೆ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಘೋಷಣೆಗೂ ಮುನ್ನ ಡಿ.ವಿ ಸದಾನಂದಗೌಡರ ಟೆಕೆಟ್ ಇಲ್ಲ ಅನ್ನೋದನ್ನ ಖುದ್ದು ಅವರೇ ಸ್ಪಷ್ಟಪಡಿಸಿದ್ದಾರೆ ಹಾಗೂ ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸದಾನಂದಗೌಡ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತದಾರರಿಗೆ ವಿಶೇಷ ಧನ್ಯವಾದ ತಿಳಿಸಿದ್ದಾರೆ.

ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ.

ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಹೇಳಿದ್ದಾರೆ.

ಅಮಿತ್ ಶಾ ಅವರು ಕರೆ ಮಾಡಿ ಮಾತುಕತೆ ನಡೆಸಿದ ಬಳಿಕ ಡಿ.ವಿ ಸದಾನಂದಗೌಡ ಅವರು ತಮಗೆ ಟಿಕೆಟ್ ಮಿಸ್ ಆದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು