ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ಸಮಸ್ಯೆಯಿಂದಾಗಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.