Bengaluru 29°C
Ad

ದರ್ಶನ್‌ ಗ್ಯಾಂಗ್‌ಗೆ ಬಿಗ್‌ ಶಾಕ್; ನಾಲ್ವರು ಮಾತ್ರ ಬೇರೆ ಜೈಲಿಗೆ ಶಿಫ್ಟ್

Gang

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಗ್ಯಾಂಗ್‌ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶನಿವಾರ ಆರೋಪಿಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ ದರ್ಶನ್ ಅವರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು. ಇದೇ ವೇಳೆ ಆರೋಪಿಗಳಲ್ಲಿ ಕೆಲವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಲಾಗಿತ್ತು.

ಇಂದು ದರ್ಶನ್ ಗ್ಯಾಂಗ್‌ ಬಗ್ಗೆ ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಒಪ್ಪಿಗೆ ಸೂಚಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ರವಿಶಂಕರ್, ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆದ ಆರೋಪಿಗಳು ಬರೀ ಕುತಂತ್ರವಷ್ಟೇ ಅಲ್ಲ ಒಳಸಂಚಿನಲ್ಲಿ ಭಾಗಿಯಾಗಿದ್ದಾರೆ. ಒಂದೇ ಜೈಲಿನಲ್ಲಿದ್ರೆ ಕೊಲೆ ಆರೋಪಿಗಳು ಅವರವರೇ ಹೊಡೆದಾಡಿಕೊಳ್ಳಬಹುದು ಅಂತಲೂ ಪೊಲೀಸರಿಗೆ ಡೌಟ್ ಇತ್ತು. ಆರೋಪಿಗಳ ಮಧ್ಯೆಯೇ ಪರಸ್ಪರ ದ್ವೇಷ ಹುಟ್ಟಿಕೊಂಡಿರುವ ಸುಳಿವು ಸಿಕ್ಕಿದೆ. ದರ್ಶನ್‌ ಕಡೆಯವರು ಸಹ ಆರೋಪಿಗಳ ಮೇಲೆ ಹಲ್ಲೆ ನಡೆಸುವ ಸಾಧ್ಯತೆ ಇದೆ ಅಂತ ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ್ದ ರಿಮ್ಯಾಂಡ್ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದರು.

Ad
Ad
Nk Channel Final 21 09 2023
Ad