News Karnataka Kannada
Monday, April 29 2024
ಬೆಂಗಳೂರು

ರಜನಿಕಾಂತ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಕಾಸ್ಟಿಂಗ್ ಡೈರೆಕ್ಟರ್‌

Rajani
Photo Credit : News Kannada

ಬೆಂಗಳೂರು: ನಟಿ ಆಗಬೇಕೆಂಬ ಮಹಾದಾಸೆಗೆ ಬಿದ್ದ ಯುವತಿಯೊಬ್ಬಳು ಲಕ್ಷಾಂತರ ರೂ. ಹಣವನ್ನು ಕಳೆದುಕೊಂಡಿದ್ದಾಳೆ. ಸ್ಟಾರ್‌ ನಟರ ಹೆಸರೇಳಿಕೊಂಡು ವ್ಯಕ್ತಿಯೊಬ್ಬ ಯುವತಿಯಿಂದ ಹಣ ಸುಲಿಗೆ ಮಾಡಿದ್ದಾನೆ.

ರಜನಿಕಾಂತ್ ಅವರ ಹೊಸ ಸಿನಿಮಾ Thalaiver 171- code red ಸಿನಿಮಾ ಹೆಸರು ಬಳಸಿಕೊಂಡು ಮೋಸ ಮಾಡಲಾಗಿದೆ. ಕಾಸ್ಟಿಂಗ್ ಡೈರೆಕ್ಟರ್ ಸುರೇಶ್ ಕುಮಾರ್ ಎಂಬಾತ ರಜನಿಕಾಂತ್ ಚಿತ್ರದಲ್ಲಿ ಪಾತ್ರವೊಂದು ಖಾಲಿ ಇದೆ ಎಂದು ಇನ್ಸ್ಟಾಗ್ರಾಂನಲ್ಲಿ ವಿಡಿಯೊವನ್ನು ಹರಿಬಿಟ್ಟಿದ್ದ.

ಇದನ್ನು ನೋಡಿ ಯುವತಿಯೊಬ್ಬಳು ಸುರೇಶ್ ಕುಮಾರ್‌ನನ್ನು ಸಂಪರ್ಕ ಮಾಡಿದ್ದಳು. ನಂತರ ಕಾಸ್ಟಿಂಗ್‌ಗೆ ಇಷ್ಟು ಹಣ ಖರ್ಚಾಗುತ್ತೆ ಎಂದು ಸಬೂಬು ಹೇಳಿ, ಹಂತ ಹಂತವಾಗಿ 3,94,000 ರೂ. ಹಣವನ್ನು ದೋಚಿದ್ದಾನೆ. ಇತ್ತ ಯುವತಿಯಿಂದ ಹಣ ಸುಲಿಗೆ ಮಾಡಿ, ಅವಕಾಶವನ್ನು ಕೊಡದೆ, ಹಣವನ್ನೂ ವಾಪಾಸ್ ಕೊಡದೆ ಪರಾರಿ ಆಗಿದ್ದಾನೆ.

ಇತ್ತ ಹಣವೂ ಇಲ್ಲದೆ ಅವಕಾಶವೂ ಇಲ್ಲದೇ ಮೋಸ ಹೋದ ಯುವತಿ ಕಂಗಲಾಗಿದ್ದಾಳೆ. ಕಾಸ್ಟಿಂಗ್ ಡೈರೆಕ್ಟರ್ ಸುರೇಶ್ ಕುಮಾರ್ ವಿರುದ್ಧ ಐಟಿ ಆಕ್ಟ್ ನಡಿ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು