ಬೆಂಗಳೂರು: ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “Online Live NEET/JEE/CET” ತರಗತಿಗಳ ತರಬೇತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಶಾಲಾ ಶಿಕ್ಷಣ (ಪದವಿ ಪೂರ್ವ) ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಉಚಿತ NEET/JEE/CET ಆನ್‍ಲೈನ್ ಕೋಚಿಂಗ್ ತರಗತಿಗಳ ತರಬೇತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, 25 ಸಾವಿರ ವಿದ್ಯಾರ್ಥಿಗಳು ಈ ತರಬೇತಿ ಪಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಲಾಗಿನ್ ಐಡಿ ನೀಡಲಾಗಿದೆ. ಆಸಕ್ತ ಎಲ್ಲಾ ವಿದ್ಯಾರ್ಥಿಗಳು ಸಹ ಆನ್‍ಲೈನ್ ಉಚಿತ ತರಬೇತಿ ಪಡೆಯಬಹುದು ಎಂದರು.
ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಶೈಕ್ಷಣಿಕ ಜೀವನದ ಬಹಳ ಪ್ರಮುಖವಾದ ಹಂತವಾಗಿದ್ದು, ಭವಿಷ್ಯದ ವೃತ್ತಿ ಆಯ್ಕೆಗೆ ಪೂರಕವಾದ ಶಿಕ್ಷಣ ಆಯ್ಕೆ ಮಾಡಲು NEET/JEE/CET ಪರೀಕ್ಷೆಗಳಲ್ಲಿ ಉತ್ತಮ ಶ್ರೇಣಿ ಪಡೆಯುವುದು ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪೋಷಕರು ಹೆಚ್ಚಾಗಿ ಖಾಸಗಿ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡುತ್ತಾರೆ. ಅಲ್ಲಿ ನಿಗಧಿತ ತರಗತಿಗೆÀ ಚಟುವಟಿಕೆಗಳೊಂದಿಗೆ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಗೂ ಸಹ ತರಬೇತಿಯನ್ನು ನೀಡುತ್ತಾರೆ ಎಂಬ ಉದ್ದೇಶ ಪೋಷಕರದ್ದಾಗಿರುತ್ತದೆ.
ಆರ್ಥಿಕ ಸಮಸ್ಯೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರಿಯಾದ ಸಾರಿಗೆ ಸೌಲಭ್ಯ ಸಿಗದೆ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಕನಸು ಈಡೇರುವುದಿಲ್ಲ ಎಂಬುದನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ “NEET/JEE/CET ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಸಿಗÀಬೇಕು ಎನ್ನುವ ಉದ್ದೇಶದಿಂದ ಉನ್ನತ ಶಿಕ್ಷಣ ಕೋರ್ಸ್‍ಗಳ ಪ್ರವೇಶ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿಯನ್ನು ಉಚಿತವಾಗಿ ನೀಡಲು 2024-25ನೇ ಆಯವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಇಡೀ ರಾಜ್ಯದಲ್ಲಿ ಇಂದಿನಿಂದ ಜಾರಿಗೆ ತರಲಾಗಿದೆ ಎಂದರು.
ಸಂವಾದದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮಾತನಾಡಿ, ಈ ಯೋಜನೆ ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ, ಒಂಟಿ ಪೋಷಕರಿಗೆ ತುಂಬಾ ಅನುಕೂಲವಾಗಲಿದ್ದು, ಇದರ ಪ್ರಯೋಜನವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುತ್ತೇವೆ. ಈ ಯೋಜನೆ ಅನುಷ್ಠಾನಗೊಳಿಸಿದ್ದಕ್ಕಾಗಿ ಸಚಿವರಿಗೆ ಧನ್ಯವಾದ ಅರ್ಪಿಸಿದರು.
ಉಪನ್ಯಾಸಕರು ಮಾತನಾಡಿ, ಈ ಯೋಜನೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ. ಈ ತರಬೇತಿಯಿಂದ ಉತ್ತಮ ಫಲಿತಾಂಶ ದೊರಕಿಸಿಕೊಡಲು ಉಪನ್ಯಾಸಕರುಗಳಾದ ನಾವುಗಳು ಶ್ರಮಿಸುತ್ತೇವೆ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕಿ ಶ್ರೀಮತಿ ಸಿಂಧೂ ಬಿ.ರೂಪೇಶ್, ಆನ್‍ಲೈನ್‍ನಲ್ಲಿ 650 ಕಾಲೇಜಿನ 60 ಸಾವಿರ ವಿದ್ಯಾರ್ಥಿಗಳು ಹಾಗೂ ಸಂವಾದದಲ್ಲಿ ಸುಮಾರು 50 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.