ಒಂದು ಸಾವಿರ ಮಂದಿಗೆ ಉಚಿತ ಅಂಗಾಂಗ ಜೋಡಣೆ

ಬೆಂಗಳೂರು: ಉದಯ್‌ ಪುರದ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ವಯಂ ಸೇವಾ ಸಂಸ್ಥೆ ನಾರಾಯಣ್‌ ಸೇವಾ ಸಂಸ್ಥಾನ್‌ ನಿಂದ ಜುಲೈ 16 ರಂದು ಬೆಂಗಳೂರಿನಲ್ಲಿ ದಿವ್ಯಾಂಗರಿಗೆ ಹೊಂದಿಕೆಯಾಗುವಂತೆ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ಆಯೋಜಿಸಲಾಗಿದೆ ಎಂದು ನಾರಾಯಣ್‌ ಸೇವಾ ಸಂಸ್ಥಾನದ ಸಾರ್ವಜನಿಕ ಸಂಪರ್ಕಾಧಿಕಾರಿ ಭಗವಾನ್‌ ಪ್ರಸಾದ್‌ ಗೌರ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶೇಷವಾಗಿ ಕರ್ನಾಟಕದ ಜನರಿಗಾಗಿ ಈ ಬೃಹತ್‌ ಶಿಬಿರ ಏರ್ಪಡಿಸಿದ್ದು, ಒಂದು ಸಾವಿರ ಮಂದಿಗೆ ಉಚಿತ ಅಂಗಾಂಗ ಜೋಡಣೆ ಮೂಲಕ ಹೊಸ ಬದುಕು ನೀಡಲು ಸಂಸ್ಥೆ ಸಜ್ಜಾಗಿದೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ್ ಕುಮಾರ್, ಆಚಾರ್ಯ ವಿಮಲ್ ಸಾಗರ್ ಮಹಾರಾಜ್ ಅವರು ಶಿಬಿರದಲ್ಲಿ ಭಾಗವಹಿಸಲಿದ್ದು, ಅರ್ಹ ಫಲಾನುಭವಿಗಳಿಗೆ ಹೊಂದಿಕೆಯಾಗುವಂತೆ ಕೃತಕ ಅಂಗಾಂಗಗಳ ಅಳತೆ ತೆಗೆದುಕೊಂಡು ನಂತರ ಸಿದ್ಧಪಡಿಸಿ ಇನ್ನೊಂದು ತಿಂಗಳಲ್ಲಿ ನಡೆಯಲಿರುವ ಬೃಹತ್‌ ಶಿಬಿರದಲ್ಲಿ ಅಳವಡಿಸಲಾಗುವುದು ಎಂದರು.

ಕಳೆದ 38 ವರ್ಷಗಳಿಂದ ಅಪಘಾತ ಮತ್ತಿತರ ಅವಘಡಗಳಲ್ಲಿ ಅಂಗಾಂಗ ಕಳೆದುಕೊಂಡವರಿಗೆ ಕೃತಕ ಅಂಗಾಂಗ ಜೋಡಣೆ ಮಾಡುತ್ತಿದ್ದು, ಬೆಂಗಳೂರಿನ ವಿವಿಪುರದಲ್ಲಿರುವ ಅರಸೋಜಿ ರಾವ್‌ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿಶೇಷ ಚೇತನರಿಗೆ ಪರಿಣಿತ ವೈದ್ಯರು ಅಳವಡಿಕೆಮಾಡಲಿರುವ ಅಂಗಾಂಗಗಳ ಅಳತೆ ತೆಗೆದುಕೊಳ್ಳಲಿದ್ದಾರೆ. ಇದು ನಾರಾಯಣ್‌ ಸೇವಾ ಸಂಸ್ಥಾನ್‌ ನ 988 ನೇ ಶಿಬಿರವಾಗಿದ್ದು, ಶೀಘ್ರದಲ್ಲೇ ಈ ಸಂಖ್ಯೆ ಸಾವಿರದ ಗಡಿ ದಾಟಲಿದೆ ಎಂದರು.

ನಾರಾಯಣ್‌ ಸೇವಾ ಸಂಸ್ಥಾನ್‌ ನ ವಕ್ತಾರ ರಜತ್‌ ಗೌರ್‌ ಮಾತನಾಡಿ, ಸಂಸ್ಥೆಯ ಅನುಭವಿ ಮೂಳೆ ತಜ್ಞರು, ಪ್ರಾಸ್ತೆಟಿಕ್ ವೈದ್ಯರ ತಂಡದಿಂದ ವಿಕಲಚೇತನರಿಗಾಗಿ ಆರೈಕೆ ಜೊತೆಗೆ ಅಂಗಾಂಗ ಅಳವಡಿಸಲು ನೆರವು ನೀಡಲಾಗುವುದು. ರೋಗಿಗಳು ತಮ್ಮ ಅಗತ್ಯತೆಗಳಿಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಹಗುರ ಮತ್ತು ದೀರ್ಘಕಾಲ ಬಾಳಿಕೆ ಬರುವ ಕೃತಕ ಅಂಗಾಂಗಳನ್ನು ತಯಾರಿಸಿ ಅಳವಡಿಸಲಾಗುವುದು ಎಂದರು.

ಶಿಬಿರದ ಸಮನ್ವಯಕಾರ ರೋಹಿತ್‌ ತಿವಾರಿ ಮಾತನಾಡಿ, ಫಲಾನುಭವಿಗಳು ಶಿಬಿರಕ್ಕೆ ಆಧಾರ್‌ ಕಾರ್ಡ್‌, ವಿಕಲಚೇತನ ಇಲಾಖೆ ನೀಡಿರುವ ಪ್ರಮಾಣ ಪತ್ರ, ತಮ್ಮ ಅಂಗಾಂಗ ನ್ಯೂನತೆ ಪ್ರತಿಬಿಂಬಿಸುವ ಎರಡು ಭಾವಚಿತ್ರ ತರಬೇಕು. ಶಿಬಿರದಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಮಾಧ್ಯಮ ಸಮನ್ವಯಕಾರರಾದ ಬಿ.ವಿ ಚಂದ್ರಶೇಖರಯ್ಯ ಮಾತನಾಡಿ, ನಾರಾಯಣ್ ಸೇವಾ ಸಂಸ್ಥಾನ್ ಇಡೀ ದೇಶದಲ್ಲಿ ಮಾನವೀಯ ಸೇವೆ ಸಲ್ಲಿಸುತ್ತಿದ್ದು, ಕೃತಕ ಕೈ ಕಾಲು, ಅಂಗಾಂಗಳನ್ನು ಜೋಡಿಸುವ ಮೂಲಕ ದಿವ್ಯಾಂಗರದಲ್ಲಿ ಹೊಸ ಆಶಾಕಿರಣ ಮೂಡಿಸಿದೆ ಎಂದರು.

Ashika S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

4 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

26 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

52 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago