News Karnataka Kannada
Sunday, April 28 2024
ಬೆಂಗಳೂರು

ಇಂದಿನಿಂದ ‘ಅನ್ನಭಾಗ್ಯ’ ಫಲಾನುಭವಿಗಳ ಖಾತೆಗೆ ಹಣ ಜಮೆ

From today onwards, money will be credited to the accounts of 'Annabhagya' beneficiaries.
Photo Credit : News Kannada

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಅದರಂತೆ ಇಂದಿನಿಂದ ‘ಅನ್ನಭಾಗ್ಯ’ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. 5 ಕೆಜಿ ಅಕ್ಕಿ ಬದಲು ಇಂದು ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತೆ. ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ಕಾರ 5 ಕೆಜಿ ಅಕ್ಕಿ ಬದಲು ತಲಾ 170 ರೂ. ಪಾವತಿಸಲಿದೆ.

ಸಚಿವರ ಪ್ರಕಾರ ರಾಜ್ಯದಲ್ಲಿ 4 ಸದಸ್ಯರನ್ನೊಳಗೊಂಡ 1.29 ಕೋಟಿ ಬಿಪಿಎಲ್ ಕಾರ್ಡ್ ಕುಟುಂಬಗಳಿದ್ದು ಒಟ್ಟು 41 ಕೋಟಿ ಫಲಾನುಭವಿಗಳಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆ.ಜಿ ಅಕ್ಕಿ ಕೊಡುವುದು ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಪೈಕಿ ಒಂದಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು