ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೊಂದು ಗ್ಯಾಸ್‌ ಸಿಲಿಂಡರ್‌ ಸೋರಿಕೆಯಾಗಿದ್ದು, ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿಯಿಂದ 7 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ.

ಅಗ್ನಿ ದುರಂತದಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ ಸಂಭವಿಸಿ, 7 ಜನ ಕಾರ್ಮಿಕರಿಗೆ ಗಂಭೀರವಾಗಿ ಗಾಯಗಳಾಗಿವೆ. ಕಾಡುಮನೆ ಸರ್ಕಲ್ ಬಳಿ ಇರುವ ಬಿಡದೆ ಕೈಗಾರಿಕಾ ಪ್ರದೇಶದಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ.

ಕಟ್ಟಡಕ್ಕೆ ಹೊತ್ತಿಕೊಂಡ ಬೆಂಕಿಯಿಂದ ಹಲವರಿಗೆ ಗಾಯಗಳಾಗಿವೆ. ರಾಮನಗರ ತಾಲೂಕಿನ ಕಾಡುಮನೆ ವೃತ್ತದ ಬಳಿ ಒಂದೇ ಶೆಡ್ ನಲ್ಲಿ 7 ಜನ ಕಟ್ಟಡ ಕಾರ್ಮಿಕರ ವಾಸವಾಗಿದ್ದರು. ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 7 ಕಟ್ಟಡ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ.

ತಕ್ಷಣ ಗಾಯಾಳುಗಳನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.