News Karnataka Kannada
Thursday, April 25 2024
ಬೆಂಗಳೂರು

ಬೆಂಗಳೂರು: ಗ್ಯಾರೇಜ್‌ನಲ್ಲಿ ಗ್ಯಾಸ್ ವೆಲ್ಡಿಂಗ್ ಮಶಿನ್ ಬ್ಲಾಸ್ಟ್

ನಗರದ ವೆಸ್ಟ್ ಆಫ್‌ ಕಾರ್ಡ್ ರಸ್ತೆಯ ಗ್ಯಾರೇಜ್‌ನಲ್ಲಿ ಕಾರಿಗೆ ವೆಲ್ಡಿಂಗ್ ಮಾಡುತ್ತಿರುವಾಗ ಗ್ಯಾಸ್‌ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಸುತ್ತಲಿನ ಮನೆಗಳು ಹಾಗೂ ಕಟ್ಟಡಗಳಲ್ಲಿ ನಡುಕ ಉಂಟಾಗಿದೆ.
Photo Credit : News Kannada

ಬೆಂಗಳೂರು: ನಗರದ ವೆಸ್ಟ್ ಆಫ್‌ ಕಾರ್ಡ್ ರಸ್ತೆಯ ಗ್ಯಾರೇಜ್‌ನಲ್ಲಿ ಕಾರಿಗೆ ವೆಲ್ಡಿಂಗ್ ಮಾಡುತ್ತಿರುವಾಗ ಗ್ಯಾಸ್‌ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಸುತ್ತಲಿನ ಮನೆಗಳು ಹಾಗೂ ಕಟ್ಟಡಗಳಲ್ಲಿ ನಡುಕ ಉಂಟಾಗಿದೆ.

ಭಾರಿ ಶಬ್ದ ಉಂಟಾಗಿದ್ದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಈ ಘಟನೆ ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯ ಬಸವೇಶ್ವರ ನಗರದ ಪೈ ಶೋರೂಮ್‌ ಬಳಿ ನಡೆದಿದೆ. ಇಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿಯಿದ್ದ ಕಾರ್ ಗ್ಯಾರೇಜ್‌ನಲ್ಲಿ ದುರಸ್ತಿಗೊಂಡ ಕಾರಿಗೆ ವೆಲ್ಡಿಂಗ್ ಮಾಡಲಾಗುತ್ತಿದೆ.

ಈ ವೇಳೆ ಗ್ಯಾಸ್ ಸಿಲಿಂಡರ್ ಬಳಿ ಬೆಂಕಿ ಹೊತ್ತಿಕೊಂಡು ಸ್ಫೋಟ ಉಂಟಾಗಿದೆ. ಸಿಲಿಂಡರ್ ಬಳಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದವರೆಲ್ಲರೂ ಅಲ್ಲಿಂದ ಓಡಿ ಹೋಗಿದ್ದಾರೆ. ಆದ್ದರಿಂದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳದಲ್ಲಿ ಸೇರಿದ್ದ ಜನರನ್ನು ಚದುರಿಸಿದ್ದಾರೆ.

ಇದರ ಬೆನ್ನಲ್ಲಿಯೇ ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿವೆ.

ಜಾರ್ಜ್ ಎಂಬುವವರಿಗೆ ಸೇರಿದ ಗ್ಯಾರೇಜ್ ಇದಾಗಿದ್ದು, ಶಿವು ಹಾಗು ಜಾರ್ಜ್ ಕೆಲಸ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು