ಬೆಂಗಳೂರು

ಸೌಹಾರ್ದ ಸಮಾಜ ಸ್ಥಾಪನೆಗೆ ಘಟಬಂಧನ್‌ ಸಭೆ ಮೆಟ್ಟಿಲು: ಸಿಎಂ

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಮಹಾಘಟಬಂಧನ್ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರ ಎನ್ ಡಿಎಗೆ ಸೆಡ್ಡು ಹೊಡೆದು ಅಧಿಕಾರಕ್ಕೆ ಬರಲು ತಂತ್ರ ರೂಪಿಸುತ್ತಿದ್ದು ಅದರ ಭಾಗವಾಗಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸಭೆ ಸೇರಿವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಸಭೆಗೆ ಆಗಮಿಸಿದ ದೇಶದ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಸ್ವಾಗತಿಸಿದರು.

ಸರ್ವಾಧಿಕಾರ, ಕೋಮುವಾದ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಒಗ್ಗೂಡಿದ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸೌಹಾರ್ದದ ತೋಟದಲ್ಲಿ ಬಿತ್ತಿದ ಬೀಜಗಳು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮರುಸ್ಥಾಪಿಸಲು ಈ ಸಭೆ ಮುಂದಡಿಯಿಟ್ಟಿದೆ ಎಂದು ಹೇಳಿದ್ದಾರೆ.

ಈ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಕಾರ್ಯಕ್ರಮ ಕುರಿತು ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ 42 ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಗಮನಹರಿಸಿ ಸಮಸ್ಯೆ ಪರಿಹರಿಸುವ ಬದಲು ಘಟಬಂಧನ್‌ ರಚನೆಗೆ ಮುಂದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ಜೆಡಿಎಸ್‌ ಅಂತ್ಯವಾಯಿತು ಎಂಬ ಭ್ರಮೆಯಲ್ಲಿದೆ. ಸಭೆಗೆ ನಮಗೆ ಆಹ್ವಾನ ಕುರಿತು ನಾನು ತಲೆಕೆಡಿಸಿಕೊಂಡಿಲ್ಲ. ಆದರೆ ರೈತರು ಸಾಯುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮಕ್ಕೆ ಕೋಟಿಗಟ್ಟಲೆ ಖರ್ಚು ಮಾಡಲಾಗುತ್ತಿದೆ ಇದು ನಮಗೆ ನೋವು ತಂದಿದೆ ಎಂದರು.

ಎನ್‌ಡಿಎ ಸೇರುವ ಕುರಿತು ಕೇಳಿದಾಗ, ನಮಗೆ ಈ ಕುರಿತು ಆಹ್ವಾನ ಬಂದಿಲ್ಲ ಎಂದು ಹೇಳಿದ್ದಲ್ಲದೆ, ಎಲ್ಲದಕ್ಕೂ ಸಮಯವಿದೆ ಎಂದರು.

Ashika S

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

12 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

31 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

46 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

58 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago