ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಗೌರಿ ಲಂಕೇಶ್ ಅವರನ್ನು ಹತ್ಯೆಗೈದು ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಆರು ವರ್ಷಗಳ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ಗೌರಿ ಲಂಕೇಶ್ ಹತ್ಯೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಮೀನು ಅರ್ಜಿಯನ್ನು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠದಿಂದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
6 ವರ್ಷದ ಬಳಿಕ ಮೂವರಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ನಂತರ ಆರೋಪಿಗಳು ಇಂದು ಸಂಜೆ ವೇಳೆಗೆ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.

