News Karnataka Kannada
Sunday, April 28 2024
ಬೆಂಗಳೂರು

ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿಗೆ ಷರತ್ತುಬದ್ಧ ಜಾಮೀನು

Gauri Lankesh murder case: 11th accused gets conditional bail
Photo Credit : News Kannada

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್  ಹತ್ಯೆ ಪ್ರಕರಣದ 11ನೇ ಆರೋಪಿ ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದೆಂದು ಹೈಕೋರ್ಟ್ ಷರತ್ತು ವಿಧಿಸಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ.

ಪ್ರಕರಣ ಸಂಬಂಧ ಇನ್ನೂ 400 ಸಾಕ್ಷಿಗಳ ವಿಚಾರಣೆ ಬಾಕಿಯಿರುವ ಹಿನ್ನೆಲೆ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ಆರೋಪಿ ಮೋಹನ್ ನಾಯಕ್ ಐದು ವರ್ಷಗಳಿಂದ ಜೈಲಿನಲ್ಲಿದ್ದು, ಇತರೆ ಸಂಘಟಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪವಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು