ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಹೆಚ್ಚಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 75 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆಯೂ ಗ್ರಾಮ್ಗೆ 2 ರೂನಷ್ಟು ಜಿಗಿತ ಕಂಡಿದೆ. ಎರಡೂ ಕೂಡ ಹೊಸ ದಾಖಲೆ ಬೆಲೆ ಪಡೆದಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇವೆರಡೂ ಲೋಹಗಳಿಗೆ ಭಾರೀ ಬೇಡಿಕೆ ಮುಂದುವರಿದಿದೆ.
ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,870 ರೂಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 8,100 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,100 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,825 ರೂಪಾಯಿಯಲ್ಲಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) ಬೆಂಗಳೂರು: 64,100 ರೂ., ಚೆನ್ನೈ: 65,000 ರೂ., ಮುಂಬೈ: 64,100 ರೂ., ದೆಹಲಿ: 64,250 ರೂ., ಕೋಲ್ಕತಾ: 64,100 ರೂ., ಕೇರಳ: 64,100 ರೂ., ಅಹ್ಮದಾಬಾದ್: 64,150 ರೂ., ಜೈಪುರ್: 64,250 ರೂ., ಲಕ್ನೋ: 64,250 ರೂ., ಭುವನೇಶ್ವರ್: 64,100 ರೂಪಾಯಿ ಇದೆ.