ಬೆಂಗಳೂರು: ಏರಿಕೆ ನಿರೀಕ್ಷೆಯಲ್ಲಿದ್ದ ಚಿನ್ನದ ಬೆಲೆ ತುಸು ಇಳಿದಿದೆ. ಅಪರೂಪಕ್ಕೆ ಬೆಳ್ಳಿ ಬೆಲೆ ಸತತ ಏರಿಕೆ ಕಾಣುತ್ತಿದೆ. . ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ.
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.