News Karnataka Kannada
Monday, May 06 2024
ಬೆಂಗಳೂರು

ಮಾರುಕಟ್ಟೆಯಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ

gold
Photo Credit : By Author

ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರದ ಮಧ್ಯೆ ಯಥಾಸ್ಥಿತಿಯಲ್ಲಿವೆ. ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ದುಬೈ, ಸಿಂಗಾಪುರ ಮೊದಲಾದ ಕಡೆ ತುಸು ಏರಿಕೆ ಆಗಿದೆ. ಕತಾರ್, ಓಮನ್ ಮೊದಲಾದೆಡೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450ರೂ.ಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,410ರೂ. ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರೂಪಾಯಿಯಲ್ಲಿ ಇದೆ. ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ), ಮಲೇಷ್ಯಾದಲ್ಲಿ 50,757 ರೂ., ದುಬೈ: 48,763ರೂ., ಸಿಂಗಾಪುರ:49,413 ರೂ., ಕುವೇತ್:9,919 ರೂಪಾಯಿ ಆಗಿದೆ..

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು