News Karnataka Kannada
Sunday, May 05 2024
ಬೆಂಗಳೂರು

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೀಗಿವೆ

gold silver rates
Photo Credit : Freepik

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಂಡಿವೆ. ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿವೆ. ಇಂದು ಚಿನ್ನದ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಗಳಿವೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂಪಾಯಿಯಲ್ಲಿ ಇದೆ. ಮಲೇಷ್ಯಾದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 50,757ರೂ.,ದುಬೈ 48,763, ಅಮೆರಿಕ 49,041, ಕತಾರ್ 50,720 ರೂ, ಕುವೇತ್ 49,919 ರೂಪಾಯಿಯಲ್ಲಿ ಇದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು