ಬೆಂಗಳೂರು

ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಹೇಗಿದೆ ಗೊತ್ತ ?

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಅಲ್ಪ ಇಳಿಕೆ ಕಂಡಿವೆ. ಕಳೆದ ವಾರ ಸತತವಾಗಿ ಏರಿಕೆ ಕಂಡಿದ್ದ ಈ ಎರಡು ಲೋಹಗಳ ಬೆಲೆ ಇದೀಗ ಸ್ವಲ್ಪ ತಗ್ಗಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಇನ್ನಷ್ಟು ಹೆಚ್ಚಬಹುದು.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 55,000 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,680 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 10 ಗ್ರಾಮ್​ಗೆ 22 ಕ್ಯಾರಟ್ ಚಿನ್ನದ ಬೆಲೆ ನೋಡುವುದಾದರೆ, ಚೆನ್ನೈ: 55,370 ರೂ, ಮುಂಬೈ: 55,000 ರೂ, ದೆಹಲಿ: 55,150 ರೂ, ಕೋಲ್ಕತಾ: 55,000 ರೂ, ಕೇರಳ: 55,000 ರೂ, ಅಹ್ಮದಾಬಾದ್: 55,050 ರೂ, ಭುವನೇಶ್ವರ್: 55,000 ರೂ. ಇದೆ.

ಇನ್ನು ವಿವಿಧ ನಗರಗಳಲ್ಲಿರುವ 100 ಗ್ರಾಮ್ ಬೆಳ್ಳಿ ಬೆಲೆ ನೋಡುವುದಾದರೆ ಚೆನ್ನೈ: 8,180 ರೂ, ಮುಂಬೈ: 7,750 ರೂ, ದೆಹಲಿ: 7,750 ರೂ, ಅಹ್ಮದಾಬಾದ್: 7,750 ರೂ, ಭುವನೇಶ್ವರ್: 8,180 ರೂ, ಕೇರಳ: 8,180 ರೂ. ಇದೆ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ashitha S

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

15 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

42 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

51 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago