ಬೆಂಗಳೂರು: ಚಿನ್ನ ಮತ್ತು ಬೆಳ್ಳೆ ಎರಡರ ಬೆಲೆಗಳೂ ಈಮದು ಇಳಿಕೆ ಕಂಡಿವೆ. ಇಂದು ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 39 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಹಳದಿ ಲೋಹದ ಬೆಲೆ ತುಸು ತಗ್ಗಿದೆ.
ಬೆಳ್ಳಿ ಬೆಲೆಯೂ ಭಾರತದಲ್ಲಿ ಗ್ರಾಮ್ಗೆ 90 ಪೈಸೆಯಷ್ಟು ಕಡಿಮೆ ಆಗಿದೆ. ಕಳೆದ ವಾರ ವಿಪರೀತ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಆಭರಣ ಪ್ರಿಯರಿಗೆ ನಿಟ್ಟುಸಿರುಬಿಡುವಂತೆ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,350 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,840 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,510 ರೂಪಾಯಿಯಲ್ಲಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) ಬೆಂಗಳೂರು: 60,350 ರೂ., ಚೆನ್ನೈ: 61,100 ರೂ., ಮುಂಬೈ: 60,350 ರೂ., ದೆಹಲಿ: 60,500 ರೂ., ಕೋಲ್ಕತಾ: 60,350 ರೂ., ಕೇರಳ: 60,350 ರೂ., ಅಹ್ಮದಾಬಾದ್: 60,400 ರೂ., ಜೈಪುರ್: 60,500 ರೂ., ಲಕ್ನೋ: 60,500 ರೂ., ಭುವನೇಶ್ವರ್: 60,350 ರೂಪಾಯಿ ಇದೆ.