ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಳ: ಬೆಳ್ಳಿ ತುಸು ಇಳಿಕೆ

ಬೆಂಗಳೂರು: ಈ ವಾರ ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ  ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದ ಕೆಲವೇ ನಗರಗಳಲ್ಲಿ ಮಾತ್ರ ತುಸು ಇಳಿಕೆಯಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 58,000 ರೂ. ಚೆನ್ನೈ: 58,500 ರೂ
ಮುಂಬೈ: 58,000 ರೂ, ದೆಹಲಿ: 58,150 ರೂ, ಕೋಲ್ಕತಾ: 58,000 ರೂ, ಕೇರಳ: 58,000 ರೂ,ಅಹ್ಮದಾಬಾದ್: 58,050 ರೂ, ಜೈಪುರ್: 58,150 ರೂ, ಲಕ್ನೋ: 58,150 ರೂ, ಭುವನೇಶ್ವರ್: 58,000 ರೂ ಆಗಿದೆ.

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ): ಬೆಂಗಳೂರು: 7,200 ರೂ, ಚೆನ್ನೈ: 7,600 ರೂ, ಮುಂಬೈ: 7,450 ರೂ, ದೆಹಲಿ: 7,450 ರೂ, ಕೋಲ್ಕತಾ: 7,450 ರೂ, ಕೇರಳ: 7,600 ರೂ, ಅಹ್ಮದಾಬಾದ್: 7,450 ರೂ, ಜೈಪುರ್: 7,450 ರೂ
ಲಕ್ನೋ: 7,450 ರೂ, ಭುವನೇಶ್ವರ್: 7,600 ರೂ.

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

13 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

40 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

58 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago