ಬೆಂಗಳೂರು: ಎರಡು ಮೂರು ದಿನಗಳ ಇಳಿಕೆ ಬಳಿಕ ಚಿನ್ನದ ಬೆಲೆ ಇಂದು ಸ್ವಲ್ಪ ಏರಿದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ದೇಶ ವಿದೇಶಗಳಲ್ಲಿ ಇವೆರಡೂ ಲೋಹಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಏರಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,550 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,780 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,720 ರೂಪಾಯಿ ಇದೆ. ಬೆಂಗಳೂರಿನಲ್ಲೂ ಇದೆ ಚಿನ್ನದ ಬೆಲೆ ಮುಂದುವರಿದಿದೆ. ಬೆಳ್ಳಿ ಬೆಲೆ ಮಾತ್ರ10 ಗ್ರಾಂಗೆ 765 ರೂ ಆಗಿದೆ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ): ಬೆಂಗಳೂರು: 57,550 ರೂ, ಚೆನ್ನೈ: 58,200 ರೂ ಮುಂಬೈ: 57,550 ರೂ, ದೆಹಲಿ: 57,700 ರೂ, ಕೋಲ್ಕತಾ: 57,550 ರೂ, ಕೇರಳ: 57,550 ರೂ, ಅಹ್ಮದಾಬಾದ್: 57,600 ರೂ, ಜೈಪುರ್: 57,700 ರೂ, ಲಕ್ನೋ: 57,700 ರೂ, ಭುವನೇಶ್ವರ್: 57,550 ರೂ.
ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.