ಬೆಂಗಳೂರು: ಚಿನ್ನದ ಬೆಲೆ ಮತ್ತೆ ಇಳಿದಿದೆ. ಬೆಳ್ಳಿ ಬೆಲೆ ಏರಿಕೆ ನಿಂತಿದೆ. ಭಾರತದಲ್ಲಿ ಚಿನ್ನದ ಬೆಲೆ 54,000 ರೂ ಒಳಗೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 53,850 ರೂ. ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,750 ರೂ. ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 7,190 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,050 ರೂ. ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,125 ರೂ ಯಲ್ಲಿ ಇದೆ.
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.