ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಿನ ಏರಿಕೆ ಕಂಡಿದೆ. ಅಮೆರಿಕದಲ್ಲಿ ಬಡ್ಡಿದರ ಏರಿಕೆ ಸಾಧ್ಯತೆ ಇಲ್ಲದೇ ಇರುವುದೇ ಚಿನ್ನಕ್ಕೆ ಬೇಡಿಕೆಯನ್ನು ಹೆಚ್ಚಿಸಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಗತಿಯಲ್ಲಿ ಮೇಲೇರಿದ್ದು, ಗ್ರಾಮ್ ಚಿನ್ನ ಬರೋಬ್ಬರಿ 100 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಎರಡೂವರೆ ರೂನಷ್ಟು ಜಿಗಿತ ಕಂಡಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,650 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,890 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರೂಪಾಯಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ) : ಬೆಂಗಳೂರು: 57,650 ರೂ, ಚೆನ್ನೈ: 58,200 ರೂ, ಮುಂಬೈ: 57,650 ರೂ, ದೆಹಲಿ: 57,800 ರೂ, ಕೋಲ್ಕತಾ: 57,650 ರೂ, ಕೇರಳ: 57,650 ರೂ, ಅಹ್ಮದಾಬಾದ್: 57,700 ರೂ, ಜೈಪುರ್: 57,800 ರೂ, ಲಕ್ನೋ: 57,800 ರೂ, ಭುವನೇಶ್ವರ್: 57,650 ರೂ ಇದೆ.
ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ