ನಮ್ಮ ಮೆಟ್ರೋದಿಂದ ಗುಡ್‌ ನ್ಯೂಸ್‌: ಮೊಬೈಲ್​​ ಕ್ಯೂಆರ್​​ ಮೂಲಕ ಟಿಕೆಟ್ ಖರೀದಿಗೆ ರಿಯಾಯ್ತಿ

ಬೆಂಗಳೂರು: ನಮ್ಮ ಮೆಟ್ರೋಗೆ ಅವಲಂಬಿತರಾಗಿರುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನ ಮೆಟ್ರೋ ನಿಲ್ದಾಣದ ಒಳಗೆ ಪ್ರತಿ ಬಾರಿಯೂ ಟಿಕೆಟ್​ಗಾಗಿ ಸರತಿ ಸಾಲಿನಲ್ಲಿ ನಿಂತು ಸಮಯ ಹರಣವಾಗುತ್ತಿದ್ದ ಬಗ್ಗೆ ಬೇಸರ ಹೊರ ಹಾಕುತ್ತಿದ್ದರು. ಸದ್ಯ ಈಗ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ ಗುಡ್​ ನ್ಯೂಸ್​​​ ನೀಡಿದೆ. ಇನ್ಮುಂದೆ ಮೆಟ್ರೋ ಪ್ರಯಾಣಿಕರು ಟಿಕೆಟ್​​ಗಾಗಿ ಕ್ಯೂ ನಿಲ್ಲಬೇಕಿಲ್ಲ. ವಾಟ್ಸಪ್​​​, ಯಾತ್ರಾ QR ಕೋಡ್​​​​ ಬಳಸಿ ಟಿಕೆಟ್ ಖರೀದಿಸಬಹುದು. ಜೊತೆಗೆ ಮೊಬೈಲ್​​​ ಕ್ಯೂರ್‌ ಟಿಕೆಟ್​ಗಳು ಟೋಕನ್​​​ ದರಕ್ಕಿಂತ ಶೇ.5 ರಿಯಾಯ್ತಿ ಇರಲಿದೆ.

ಇದೇ ನವೆಂಬರ್‌ 16ರಿಂದ ಈ ಹೊಸ ಸೌಲಭ್ಯ ಸಿಗಲಿದೆ. ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸಲು ಪರದಾಡುವ ಪ್ರಯಾಣಿಕರು ಮನೆ, ಕಚೇರಿ ಅಥವಾ ತಾವಿದ್ದ ಸ್ಥಳದಿಂದಲೇ ಮುಂಗಡವಾಗಿ ಮೊಬೈಲ್‌ ಕ್ಯೂಆರ್‌ ಟಿಕೆಟ್‌ ಪಡೆಯಬುದು. ಇದರಿಂದ ಸಮಯವೂ ಉಳಿತಾಯವಾಗಲಿದೆ ಹಾಗೂ ಟೋಕನ್‌ ದರಕ್ಕಿಂತ ಶೇಕಡಾ 5ರಷ್ಟು ರಿಯಾಯಿತಿ ಕೂಡ ಸಿಗಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನವೆಂಬರ್‌ 16ರಿಂದಲೇ ಮೊಬೈಲ್‌ ಕ್ಯೂಆರ್‌ ಕೋಡ್‌ ಗ್ರೂಪ್‌ ಟಿಕೆಟ್‌ಗಳನ್ನು ಪರಿಚಯಿಸಲು ಬಿಎಮ್​ಆರ್​ಸಿಎಲ್ ಮುಂದಾಗಿದೆ.

Umesha HS

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago