ಬೆಂಗಳೂರು : ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿಪಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

