ಅಂಚೆ ಇಲಾಖೆಯಿಂದ ಸಿಹಿ ಸುದ್ದಿ: ಇನ್ಮುಂದೆ ಪಿಂಚಣಿ ಹಣ ಮನೆಯಲ್ಲೇ ಡ್ರಾ ಮಾಡಿ

ಬೆಂಗಳೂರು: ಅಂಚೆ ಕಚೇರಿಗಳಲ್ಲಿ ಖಾತೆ ಹೊಂದಿರುವ ಲಕ್ಷಾಂತರ ಪಿಂಚಣಿದಾರರು ತಮ್ಮ ಹಣ ಪಡೆಯಲು ಅಂಚೆ ಕಚೇರಿಗೆ ಹೋಗಿ ಬರಬೇಕೆಂದಿಲ್ಲ. ಮನೆಯಲ್ಲೇ ಕುಳಿತು ತಮ್ಮ ಹಣ ಡ್ರಾ ಮಾಡಿಕೊಳ್ಳಬಹುದಾಗಿದೆ.

ಭಾರತೀಯ ಅಂಚೆ ಇಲಾಖೆ ಇಂಥದೊಂದು  ವಿಧಾನ ಅನುಷ್ಠಾನಕ್ಕೆ ತಂದಿದೆ. ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲ ಚೇತನರ ಮಾಸಾಶನ, ಎಂಡೋಸಲ್ಫಾನ್‌ ಸಂತ್ರಸ್ತರ ಮಾಸಾಶನ ಸೇರಿದಂತೆ ಅನೇಕ ಬಗೆಯ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿದಾರರು ಬಹುಪಾಲು ಅಂಚೆ ಇಲಾಖೆ ಮೂಲಕ ಪಡೆದುಕೊಳ್ಳುತ್ತಿದ್ದಾರೆ. ಇವರೆಲ್ಲರೂ ಮನೆಯಲ್ಲೇ ಹಣ ಡ್ರಾ ಮಾಡುವ ಡಿಕ್ಯೂಬ್‌ ಸಾಫ್ಟ್‌ವೇರ್‌ ಅಂಚೆ ಇಲಾಖೆಯಲ್ಲಿ ಅಭಿವೃದ್ಧಿಗೊಂಡು ಚಾಲ್ತಿಗೆ ಬರುತ್ತಿದೆ.

ಡಿಕ್ಯೂಬ್‌ ಸಾಫ್ಟ್‌ವೇರ್‌ ಮೂಲಕ ಅಭಿವೃದ್ಧಿಪಡಿಸಿದ ಆ್ಯಪ್‌ನ್ನು ಪೊಸ್ಟ್‌ಮೆನ್‌ಗಳ ಮೊಬೈಲ್‌ಗೆ ನೀಡಲಾಗಿದ್ದು, ಅವರು ಪಿಂಚಣಿದಾರರ ಮನೆಗೆ ತೆರಳುವಾಗ ನಿರ್ದಿಷ್ಟ ಮೊತ್ತದ ಹಣವನ್ನೂ ನೀಡಲಾಗುತ್ತದೆ. ಪಿಂಚಣಿದಾರ ತನ್ನ ಖಾತೆಯಿಂದ ಪಡೆಯಬೇಕಾದ ಮೊತ್ತವನ್ನು ಹೇಳಿದ ಬಳಿಕ ಆ್ಯಪ್‌ ಮೂಲಕ ಖಾತೆಯ ಪುಟ ತೆರೆದು ದಾಖಲಿಸಲಾಗುತ್ತದೆ. ಬಯೋಮೆಟ್ರಿಕ್‌ ಡಿವೈಸ್‌ ಮೂಲಕ ಪಿಂಚಣಿದಾರರ ಹೆಬ್ಬೆಟ್ಟು ಪಡೆದಾಗ ಅದು ಪೂರ್ವನಿಗದಿತ ಆಧಾರ್‌ ಲಿಂಕ್‌ನ ಆಧಾರದಲ್ಲಿ ಹಣ ಡ್ರಾ ಪ್ರಕ್ರಿಯೆಗೆ ಸಮ್ಮತಿ ನೀಡುತ್ತದೆ. ಅದರಂತೆ ನಗದನ್ನು ಖಾತೆದಾರನಿಗೆ ನೀಡಿ, ಖಾತೆಯಲ್ಲಿ ಉಳಿದಿರುವ ಮೊತ್ತದ ಮಾಹಿತಿಯನ್ನೂ ನೀಡಲಾಗುತ್ತದೆ.

Ashitha S

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

20 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

29 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

32 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

43 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

46 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

47 mins ago