ಬೆಂಗಳೂರು

ಕ್ರೀಡಾಪಟುಗಳಿಗೆ ಗುಡ್​​ನ್ಯೂಸ್: ಮಹತ್ವದ ಭರವಸೆ ನೀಡಿದ ಸಿಎಂ

ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು. ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು.

ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ಅವರು ವಿವರಿಸಿದರು. ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಓಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ ಎಂದು ಶುಭ ಹಾರೈಸಿದರು.

Ashika S

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

3 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

13 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

14 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

37 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

47 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

52 mins ago