News Karnataka Kannada
Saturday, April 13 2024
Cricket
ಬೆಂಗಳೂರು

ವಿದ್ಯಾರ್ಥಿಗಳಿಗೆ ವಿದೇಶದಲ್ಲೂ ಇಂಟರ್ನ್ ಶಿಪ್ ಗೆ ಅವಕಾಶ ಕಲ್ಪಿಸಿದ ವಿಟಿಯು

Vtu
Photo Credit : NewsKarnataka

ಬೆಂಗಳೂರು: ವಿಟಿಯು(ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ) ವಿದ್ಯಾರ್ಥಿಗಳು ಇನ್ನು ಮುಂದೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಇಂಟರ್ನ್ಶಿಪ್ ಮಾಡಬಹುದಾಗಿದೆ. ಈ ಮೊದಲು ವಿಟಿಯು ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಮಾತ್ರ ಇಂಟರ್ನ್ ಶಿಪ್ ಗೆ ಅವಕಾಶ ನೀಡಲಾಗಿತ್ತು. ಇಂಟರ್ನ್ಶಿಪ್ ವೇಳೆ ವಿದ್ಯಾರ್ಥಿಗಳು ಬೇರೆ ರಾಜ್ಯಗಳಿಗೆ ಹೋದಾಗ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ.

ಈಗ ಆನ್ಲೈನ್ ತರಗತಿ ಆರಂಭಿಸಿರುವ ವಿಟಿಯು ದೇಶ ವಿದೇಶಗಳ ಯಾವುದೇ ಭಾಗದಲ್ಲಿ ಬೇಕಾದರೂ ಇಂಟರ್ನೆಟ್ ಶಿಪ್ ಮಾಡಲು ಅವಕಾಶ ಕಲ್ಪಿಸಿದೆ.

ಏಳು ಮತ್ತು ಎಂಟನೇ ಸೆಮಿಸ್ಟರ್ ಗಳನ್ನು ವಿದ್ಯಾರ್ಥಿಗಳ ಪ್ರಾಯೋಗಿಕ ಶಿಕ್ಷಣಕ್ಕೆ ಮೀಸಲಿಟ್ಟಿದ್ದು, ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಇಂಟರ್ನ್ಶಿಪ್ ಮತ್ತು ಪ್ರಾಜೆಕ್ಟ್ ವರ್ಕ್ ಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ವಿವಿಧ ಕಂಪನಿಗಳಲ್ಲಿ ಇಂಟರ್ನ್ಶಿಪ್ ಪಡೆದುಕೊಳ್ಳುವ ವಿದ್ಯಾರ್ಥಿಗಳು ಮಾಹಿತಿಯನ್ನು ವಿಟಿಯುಗೆ ಸಲ್ಲಿಸಬೇಕು. ಕೆಲವು ವೇಳೆ ಪ್ಲೇಸ್ಮೆಂಟ್ ಅವಧಿಯಲ್ಲಿ ವಿಟಿಯು ವಿದ್ಯಾರ್ಥಿಗಳಿಗೆ ಇಂಟರ್ನೆಟ್ ದೊರಕಿಸಿಕೊಡಲಿದೆ. ಅಲ್ಲದೆ ಹಾಜರಾತಿಗೆ ಪರಿಗಣಿಸಲಾಗುತ್ತದೆ.

ವಿದ್ಯಾರ್ಥಿಗಳ ಕೌಶಲ್ಯ ಕೊರತೆ ನೀಗಿಸಲು ಅಂತಿಮ ವರ್ಷದಲ್ಲಿ ಇಂಟರ್ನ್ಶಿಪ್ ಕಡ್ಡಾಯ ಮಾಡಿದ್ದು, ಅದನ್ನು ದೇಶವಿದೇಶದಲ್ಲಿಯೂ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು