ಆನೇಕಲ್ : ನೀವು ಪ್ರವಾಸಕ್ಕೆ ಹೋಗಲು ಪ್ಲ್ಯಾನ್ ಮಾಡುತ್ತಿದ್ದರೇ ಅಂತವರಿಗೆ ಗುಡ್ ನ್ಯೂಸ್. ಹಲವಾರು ಜಾತಿಯ ಪ್ರಾಣಿಗಳು, ಪಕ್ಷಿಗಳು ಮತ್ತು ಸಸ್ಯಗಳಿಗೆ ನೆಲೆಯಾಗಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮಂಗಳವಾರ ರಜೆ ದಿನವೂ ತೆರದಿರಲಿದ್ದು, ಪ್ರವಾಸಿಗರಿಗೆ ಸಂತಸದ ಸುದ್ದಿ ನೀಡಿದೆ. ದೀಪಾವಳಿ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉದ್ಯಾನವನಕ್ಕೆ ಬರುವ ನಿರೀಕ್ಷೆ ಇದೆ.
ಮಂಗಳವಾರ ಪಾರ್ಕ್ ಅನ್ನು ಓಪನ್ ಮಾಡಿ ಬುಧವಾರ ರಜೆ ಮಾಡಲು ಬನ್ನೇರುಘಟ್ಟ ಜೈವಿಕ ಉದ್ಯಾನವನ ಆಡಳಿತ ಮಂಡಳಿ ತೀರ್ಮಾನಿಸಿದೆ. ಈ ಸಂಬಂಧ ಬುಧವಾರ (ನ.15) ದಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.