ಬೆಂಗಳೂರು: ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್ ಡಿಜಿ&ಐಜಿಪಿ ಅಲೋಕ್ ಮೋಹನ್ಗೆ ಸೂಚಿಸಿದ್ದರು.
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತಾದರೂ ಅದಕ್ಕೆ ಕೆಲ ಷರತ್ತುಗಳು ಅನ್ವಯವಾಗಿತ್ತು.
ಮಾಜಿ ಯೋಧರಿಗೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗುವ ಅವಕಾಶವಿದ್ದು, ಪೋಲಿಸರು ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಜೊತೆಗೆ ಒಂದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.