News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರಿನಲ್ಲಿ ಸರ್ಕಾರಿ ನರ್ಸರಿ ಶಾಲೆ ಕಟ್ಟಡ ಕುಸಿತ

Government nursery school building collapses
Photo Credit : News Kannada

ಬೆಂಗಳೂರು: ಎಲ್ಲ ಸರ್ಕಾರಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೋಟಿ ಕೋಟಿ ರೂ. ಹಣ ನೀಡುತ್ತಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತವೆ. ಆದರೆ ವಾಸ್ತವ ಸ್ಥಿತಿ ಬೇರೆಯೇ ಇದೆ. ಹಲವು ಶಾಲೆಗಳಿಗೆ ಕಟ್ಟಡ ಸೇರಿದಂತೆ ಸಮರ್ಪಕ ಮೂಲಸೌಕರ್ಯಗಳಿಲ್ಲದೆ ಮಕ್ಕಳ ಜೀವವೇ ಅಪಾಯದಲ್ಲಿದೆ.

ಅಂತಹುದೇ ಅಪಾಯಕಾರಿ ಸ್ಥಿತಿಯಲ್ಲಿದ್ದ ನರ್ಸರಿ ಶಾಲೆ ಕಟ್ಟಡವೊಂದು ರಾಜಧಾನಿ ಬೆಂಗಳೂರಿನಲ್ಲಿ ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಮಕ್ಕಳು ಆ ವೇಳೆ ಶಾಲೆಯಲ್ಲಿ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿಹೋಗಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ನರ್ಸರಿ ಶಾಲೆ ಕಟ್ಟಡವೊಂದು ಕುಸಿದುಬಿದ್ದಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಇಂದು (ನವೆಂಬರ್ 27) ಬೆಳಗಿನ ಜಾವ ನಸುಕಿನ ಜಾವ ಬಿದ್ದಿದೆ. ಪರಿಣಾಮ ಕಟ್ಟಡ ಅವಶೇಷದಡಿ ವಾಹನಗಳು ಸಿಲುಕಿ ಸಂಪೂರ್ಣವಾಗಿ ಜಖಂ ಆಗಿವೆ.

ಅದೃಷ್ಟವಶಾತ್ ಶಾಲೆಯಲ್ಲಿ ಮಕ್ಕಳು ಇಲ್ಲದ ವೇಳೆ ಕಟ್ಟಡ ಬಿದ್ದಿದೆ. ಇದರಿಂದ ಅನಾಹುತವೊಂದು ತಪ್ಪಿದಂತಾಗಿದೆ. ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಸ್ಕೂಲ್. ಈ ಸ್ಕೂಲ್ ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು. ದೇವರ ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ. ಇದರಿಂದ ಸಂಭವಿಸಬೇಕಿದ್ದ ಬಾರೀ ಅನಾಹುತವೊಂದು ತಪ್ಪಿದಂತಾಗಿದ್ದು, ವಿದ್ಯಾರ್ಥಿಗಳ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು