News Karnataka Kannada
Wednesday, May 01 2024
ಬೆಂಗಳೂರು

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

Cancl
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗೆ 2021ರ ಜುಲೈ 14ರಂದು ಅನುಮತಿ ನೀಡಿತ್ತು.

ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರ ನೀಡಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ವಾಪಸ್ಸು ಪಡೆದುಕೊಂಡಿದೆ. ಬಿಎಂಆರ್​ಸಿಎಲ್ ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ.

ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಬೃಹತ್ ಹೋರಾಟ ನಡೆದಿತ್ತು. ಆಟೋ ,ಟ್ಯಾಕ್ಸಿ, ಮ್ಯಾಕ್ಸಿ,ಕ್ಯಾಬ್ ಚಾಲಕರು ಬೈಕ್ ಟ್ಯಾಕ್ಸಿ ವಿರುದ್ದ ಸಿಡಿದೆದ್ದಿದ್ದರು. ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ಸಾರ್ವಜನಿಕರು ತಮ್ಮ ಮನೆಗಳಿಂದ ಬಸ್ ನಿಲ್ದಾಣಗಳು, ರೈಲ್ವೆ ಮತ್ತು ಮೆಟ್ರೋ ಸ್ಟೇಷನ್‌ಗಳಿಗೆ ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ತೆರಳುವಂತೆ ಮಾಡುವುದು.ಆದರೆ ಇದು ಮಹಿಳೆಯರಿಗೆ ಅಸುರಕ್ಷಿತ ಎಂಬ ಕೂಗು ಎದ್ದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು