ಬೆಂಗಳೂರು : ಪ್ರಸಕ್ತ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು. ಒಂದು ದಿನಕ್ಕೆ 1 ಅಂಕ ಎಂಬ ಕಾರ್ಯಕ್ರಮ ರೂಪಿಸಿದ್ದೇವೆ.
ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ ಇದಾಗಿದೆ. ವಿಶೇಷ ತರಗತಿ ಮಾಡುವ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಲಾಗುತ್ತಿದೆ. ಹೀಗಾಗಿ ಕೃಪಾಂಕವನ್ನು ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಗಿಲ್ಲ ಅನುಮತಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ವಿವಾದವು ಸದ್ಯ ಕೋರ್ಟ್ನಲ್ಲಿದೆ. ಇನ್ನೂ ಇತ್ಯರ್ಥವಾಗಿಲ್ಲ. ಆದ್ದರಿಂದ ಗೃಹಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.