ಚುನಾವಣಾ ಪ್ರಣಾಳಿಕೆಯಲ್ಲಿ ಹಸಿರು ನಗರ ನಿರ್ಮಾಣ ಆದ್ಯತೆಗೆ ಗ್ರೀನ್‌ಪೀಸ್‌ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ರೀನ್‌ಪೀಸ್ ಇಂಡಿಯಾ ಸಂಸ್ಥೆಯು ಸುಸ್ಥಿರ ನಗರಗಳು ಮತ್ತು ಪೌಷ್ಟಿಕಾಂಶದ ವೈವಿಧ್ಯತೆಗೆ ಸಂಬಂಧಿಸಿದ ಅಂಶಗಳಿಗೆ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಆದ್ಯತೆ ನೀಡುವಂತೆ ಆಗ್ರಹಿಸಿ, ಒಟ್ಟು 20 ಅಂಶಗಳ ಶಿಫಾರಸುಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಸಲ್ಲಿಸಿದೆ. ಈ ಶಿಫಾರಸ್ಸುಗಳೊಂದಿಗೆ ಗ್ರೀನ್‌ಪೀಸ್ ಇಂಡಿಯಾ, ರಾಜಕೀಯ ಪಕ್ಷಗಳಿಗೆ ಸುಸ್ಥಿರ ನಗರಗಳು, ಸರ್ವರಿಗೂ ಸಮಾನ ಸಂಚಾರ ಸಾರಿಗೆ ವ್ಯವಸ್ಥೆಯ ಅವಕಾಶಗಳು ಮತ್ತು ಸುಸ್ಥಿರ ಕೃಷಿಯಂತಹ ಪ್ರಮುಖ ಪರಿಸರ ಸಮಸ್ಯೆಗಳನ್ನು ಪ್ರಸ್ತುತ ಮತ್ತು ಭವಿಷ್ಯದ ಶಾಸನ ಸಭೆಯ ನಿರ್ಣಯಗಳಲ್ಲಿ ಗಂಭೀರವಾಗಿ ಪರಿಗಣಿಸಲು  ಹಕ್ಕೊತ್ತಾಯ ಮಂಡಿಸಿದೆ.

ಸುಸ್ಥಿರ ನಗರಗಳಿಗೆ ಸಂಬಂಧಿಸಿದಂತೆ ಮಂಡಿಸಲಾದ ಶಿಫಾರಸ್ಸುಗಳು ಸೈಕಲ್‌ ಸವಾರಿ (ಸೈಕ್ಲಿಂಗ್) ರೀತಿಯ ಸಾರ್ವಜನಿಕ ಸಾರಿಗೆ ಮತ್ತು ವಾಕಿಂಗ್‌ನಂತಹ ಮೋಟಾರುರಹಿತ ಸಾರಿಗೆ (NMT)  ಮೇಲೆ ಕೇಂದ್ರೀಕರಿಸುತ್ತವೆ. ಇದರೊಂದಿಗೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುವ ಹೈಬ್ರಿಡ್ ಮಾದರಿಯ ಕೆಲಸದ ವ್ಯವಸ್ಥೆಯನ್ನು ಬೆಂಬಲಿಸುತ್ತದೆ. ಈ ಶಿಫಾರಸ್ಸುಗಳ ಮೂಲಕ, ಹೊರ ವರ್ತುಲ ರಸ್ತೆ (ಔಟರ್‌ ರಿಂಗ್‌ ರೋಡ್‌ ORR) ಉದ್ದಕ್ಕೂ ಬಸ್ ಆದ್ಯತಾ ಲೇನ್‌ನ ಪುನರುಜ್ಜೀವನ, ಮರುನಿರ್ಮಾಣ ಮತ್ತು ಸಮಗ್ರ ಮಹಾನಗರ ಯೋಜನೆಯಲ್ಲಿ ಸೂಚಿಸಿದ 11 ಇತರ ಬಸ್ ಲೇನ್‌ಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಮಾಲಿನ್ಯದ ಮಟ್ಟಗಳನ್ನು ಗಮನದಲ್ಲಿರಿಸಿಕೊಂಡು ಈ ಬದಲಾವಣೆಗಳಿಗೆ ತುರ್ತಾಗಿ ಸ್ಪಂದಿಸುವಂತೆ  ಪ್ರಸ್ತುತ ಹಕ್ಕೊತ್ತಾಯಗಳನ್ನು ಸಲ್ಲಿಸಲಾಗಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ಹಿರಿಯ ಪ್ರಚಾರಕ ರೋಹಿನ್ ಕುಮಾರ್ ಹೇಳುತ್ತಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago