Bengaluru 26°C
Ad

ಹರೀಶ್ ಪೂಂಜ ಮನೆಯಲ್ಲಿ ಖಾಕಿ; ಯಾವುದೇ ನೋಟಿಸ್ ನೀಡಿಲ್ಲ ಎಂದ ಪೂಂಜ ಪರ ನ್ಯಾಯವಾದಿ

Harish (1)

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್ ದಾಖಲಾಗಿದ್ದು, ಈ ಹಿನ್ನಲೆ ಪೊಲೀಸರು ಪೂಂಜಾ ಅರೆಸ್ಟ್ ಗೆ ಮನೆಗೆ ಆಗಮಿಸಿದ್ದಾರೆ.

ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಎದುರಾಗಿದೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಪೂಂಜಾ ಮನೆಯಲ್ಲಿ ಹೈ ಡ್ರಾಮಾ ಮುಂದುವರೆದಿದೆ.

ಇನ್ನು ಪೂಂಜ ಪರ ವಕೀಲ ನ್ಯಾಯವಾದಿ ಶಂಭು ಶಂಕರ್ ಪ್ರತಿಕ್ರಿಯೆ ನೀಡಿ, ಶಾಸಕ ಹರೀಶ್ ಪೂಂಜ ಅವರಿಗೆ ಯಾವುದೇ ನೋಟಿಸ್‌ ನೀಡಿಲ್ಲ. ನೋಟೀಸ್ ನೀಡದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರ. ಶಾಸಕ ಪೂಂಜ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿದ್ದಾವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲೆಬಲ್. 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದ ಪ್ರಕಾರ ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶ ವಿರುತ್ತದೆ ಎಂದಿದ್ದಾರೆ.

Ad
Ad
Nk Channel Final 21 09 2023
Ad