News Karnataka Kannada
Saturday, May 04 2024
ಬೆಂಗಳೂರು

ಹರ್ಷಿಕಾ ಪೂಣಚ್ಚ- ಭುವನ್ ದಂಪತಿಯಿಂದ ಪ್ರಲ್ಹಾದ ಜೋಶಿ ಭೇಟಿ

ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಬುಧವಾರ ಚರ್ಚೆ ನಡೆಸಿದರು.
Photo Credit : By Author

ಬೆಂಗಳೂರು:  ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಬುಧವಾರ ಚರ್ಚೆ ನಡೆಸಿದರು.

ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಸಚಿವರೆದುರು ಮೊರೆಯಿಟ್ಟಿದ್ದಾರೆ. ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ನಮ್ಮ ಮೇಲೆ ಗಲಾಟೆ ಮಾಡಿದವರ ಮುಖಚರ್ಯೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ ಎಂದು ಸಚಿವರೆದುರು ಹೇಳಿದರು.

ನಮಗೆ ಆದಂತೆ ಬೇರೆ ಯಾರಿಗೂ ಆಗಬಾರದು. ಹಾಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದು, ಪೊಲೀಸರು ಆದಷ್ಟು ಬೇಗ  ಆರೋಪಿಗಳನ್ನು ಬಂಧಿಸುವ ಭರವಸೆಯಿದೆ ಎಂದು ಹರ್ಷಿಕಾ ಪೂಣಚ್ಚ ಈ ವೇಳೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ನಿಲ್ಲಿಸಿದ್ದ ಕಾರು ತೆಗೆಯುವ ಸಂದರ್ಭ ಕನ್ನಡ ಮಾತನಾಡಿದರೆಂದು ಆಕ್ರೋಶಗೊಂಡು ಅನ್ಯಕೋಮಿನ  ಕೆಲವರು ಇವರ ಮೇಲೆ ಹಲ್ಲೆ ಮಾಡಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು