ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಎಂಬುದೇನಾದರೂ ಇದ್ದರೆ ಶಿವಕುಮಾರ್‌ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಪ್ರಕರಣ ಮುಚ್ಚಿಹಾಕಲು ಬಿಡುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಪ್ರಕರಣ ಹೇಗೆ ಪ್ರಾರಂಭವಾಗಿದೆ, ಅದು ಎಲ್ಲಿ ಬಂದು ನಿಂತಿದೆ ಎಂಬುದೆಲ್ಲ ಪಾರದರ್ಶಕವಾಗಿ ತನಿಖೆಯಾಗಬೇಕು’ ಎಂದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ರಚಿಸಲಾಗಿರುವ ಎಸ್‌ಐಟಿ ತಂಡ ಪಾರದರ್ಶಕವಾಗಿ ಕೆಲಸ ಮಾಡುತ್ತಿಲ್ಲ. ಅದು ಸಿದ್ದರಾಮಯ್ಯ, ಶಿವಕುಮಾರ್ ಅವರ ತಂಡ. ಪ್ರಚಾರ ಪಡೆಯಲು ತನಿಖೆಯ ವಿವರಗಳನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ದೂರಿದರು.

ಎಸ್‌ಐಟಿ ಎಂದರೆ ವಿಶೇಷ ತನಿಖಾ ತಂಡ, ಪಾರದರ್ಶಕವಾಗಿ ಕೆಲಸ ಮಾಡುತ್ತದೆ ಎಂದುಕೊಂಡಿದೆ. ಆದರೆ, ಒಂದು ತಂಡ– ಸಿದ್ದರಾಮಯ್ಯ ತನಿಖಾ ತಂಡ ಎಂದಿದೆ. ಮತ್ತೊಂದು, ಶಿವಕುಮಾರ್‌ ತನಿಖಾ ತಂಡ ಎಂದಿದೆ. ಇವರಿಬ್ಬರು ತಮ್ಮ ನೇತೃತ್ವದಲ್ಲಿ ಮಾಡಿಕೊಂಡಿರುವ ಈ ತಂಡದಲ್ಲಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಂಡಿದ್ದಾರೆ ಎಂದರು.

ರೇವಣ್ಣ ವಿಷಯದಲ್ಲಿ ಕಿಡ್ನಾಪ್ ಎಂದು ಪ್ರಕರಣ ಸೃಷ್ಟಿ ಮಾಡಿದರು. ಈ ಮಹಿಳೆ ಕಾಳೇನಹಳ್ಳಿ ತೋಟದಮನೆಯಿಂದ ಕರೆತಂದೆವು ಎಂದಿದ್ದಾರೆ. 35 ಗಂಟೆ ಆ ಮಹಿಳೆಯನ್ನು ಕೂರಿಸಿಕೊಂಡಿದ್ದರೂ, ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ. ರೇವಣ್ಣ ಅವರು ನೀವು ಹೇಳಿದಂತೆ ಹೇಳಿಕೆ ಕೊಡುತ್ತಿಲ್ಲ ಎಂದು ಮಾಹಿತಿ ಸೋರಿಕೆ ಮಾಡಿದ್ದೀರಿ. ನೀವು ಹೇಳಿದಂತೆ ಹೇಳಿಕೆ ಕೊಟ್ಟರೆ ಅದನ್ನು ತನಿಖೆ ಎಂದು ಕರೆಯಲಾಗುತ್ತದೆಯೇ ಎಂದರು.

ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಪರ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಪೆನ್‌ಡ್ರೈವ್‌ ವಿಷಯ ನನ್ನ ಮುಂದೆ ಮೊದಲೇ ಬಂದಿದ್ದರೆ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್‌ ಕೊಡುತ್ತಿರಲಿಲ್ಲ. ಯಾರು ಏನೇ ಹೇಳಿದ್ದರೂ ನಾನು ಟಿಕೆಟ್‌ ಕೊಡುತ್ತಿರಲಿಲ್ಲ. ಅಶ್ಲೀಲ ವಿಡಿಯೊ ಬಿಡುಗಡೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿರಲಿ ಈ ನೆಲದ ಕಾನೂನಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ಆಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ಯಾವ ವ್ಯಕ್ತಿಗೂ ನಾನು ರಕ್ಷಣೆ ಕೊಡುವುದಿಲ್ಲ ಎಂದರು.

ವಿಧಾನಪರಿಷತ್‌ ಚುನಾವಣೆ ಸಂದರ್ಭದಲ್ಲಿ ಅಶ್ಲೀಲ ವಿಡಿಯೊ ಪ್ರಕರಣದಿಂದ ಮುಜುಗರ ಆಗುತ್ತದೆ ಎಂದಾದರೆ ಬಿಜೆಪಿಯವರು ಏನಾದರೂ ಬೇರೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಯಸಿದರೆ ನನ್ನ ತಕರಾರೇನಿಲ್ಲ. ಈ ಮೈತ್ರಿ ಆಗಿದ್ದೇ ಕಾಂಗ್ರೆಸ್‌ಗೆ ನಿದ್ದೆಗೆಡಿಸಿದೆ. ಇಷ್ಟೆಲ್ಲ ಕುತಂತ್ರ ಮಾಡುತ್ತಿದೆ. ಅವರ ವೇಗ, ಗ್ಯಾರಂಟಿ ಸ್ಕೀಮ್‌ ಎಲ್ಲ ಮುಗಿದುಹೋಗಿತ್ತು. ಮೈತ್ರಿಯಿಂದ ಅವರಿಗೆ ಪೆಟ್ಟು ಬಿದ್ದಿದೆ. ಚುನಾವಣೆ ಫಲಿತಾಂಶ ಅವರಿಗೆ ಗೊತ್ತಾಗಿದೆ. ಅವರವರ ಭವಿಷ್ಯ ಏನಾಗುತ್ತದೆ ಎಂಬುದು ಅವರಿಗೇ ಗೊತ್ತಾಗಿದೆ ಎಂದರು.

Chaitra Kulal

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

17 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

33 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

52 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

56 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago